Followers

Monday, July 22, 2019

ಅರಿವು-ಶೈಕ್ಷಣಿಕ ಸಾಲ ಯೋಜನೆ: 

1. ಸಾಲದ ಉದ್ದೇಶ: ಹಿಂದುಳಿದ ವರ್ಗಗಳ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕಾಭಿವೃದ್ಧಿಗಾಗಿ ಆರ್ಥಿಕ ನೆರವು.
2. ಸಾಲದ ಮೊತ್ತ: ವಾರ್ಷಿಕ ರೂ.1.00ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ.4.00 ರಿಂದ ರೂ.5.00ಲಕ್ಷಗಳ ವರೆಗೆ ಸಾಲ.
3. ಬಡ್ಡಿದರ: ವಾರ್ಷಿಕ ಶೇ.2ರಷ್ಟು.
4. ಅರ್ಹತೆ: 
ಅ) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿರಬೇಕು. (ವಿಶ್ವಕರ್ಮ ಅದರ ಉಪ ಸಮುದಾಯಗಳು, ಉಪ್ಪಾರ ಅದರ ಉಪ ಸಮುದಾಯಗಳು, ಅಂಬಿಗ ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)
ಆ) ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು.
ಇ) ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ(ಸಿ.ಇ.ಟಿ.) ಪ್ರವೇಶ ಪಡೆದಿರಬೇಕು.
5. ವ್ಯಾಸಂಗದ ಕೋರ್ಸ್‍ಗಳು: (1) ಬಿ.ಇ., (2) ಎಂ.ಬಿ.ಬಿ.ಎಸ್., (3) ಬಿ.ಯೂ.ಎಂ.ಎಸ್., (4) ಬಿ.ಡಿ.ಎಸ್. (5) ಬಿ.ಎ.ಎಂ.ಎಸ್. (6) ಬಿ.ಎಚ್.ಎಂ.ಎಸ್. (7) ಎಂ.ಬಿ.ಎ. (8) ಎಂ.ಟೆಕ್. (9)ಎಂ.ಇ., (10) ಎಂ.ಡಿ., (11) ಪಿಹೆಚ್.ಡಿ. (12) ಬಿ.ಸಿ.ಎ./ಎಂ.ಸಿ.ಎ (13) ಎಂ.ಎಸ್.ಆಗ್ರ್ರಿಕಲ್ಚರ್ (14)ಬಿ.ಎಸ್‍ಸಿ. ನರ್ಸಿಂಗ್, (15)ಬಿ.ಫಾರಂ/ಎಂ.ಫಾರಂ (16) ಬಿ.ಎಸ್‍ಸಿ. ಪ್ಯಾರಾ ಮೆಡಿಕಲ್ (17) ಬಿ.ಎಸ್‍ಸಿ. ಬಯೋ ಟೆಕ್ನಾಲಜಿ (18) ಬಿ.ಟೆಕ್ (19) ಬಿ.ಪಿ.ಟಿ. (20)ಬಿ.ವಿ.ಎಸ್.ಸಿ/ಎಂ.ವಿ.ಎಸ್.ಸಿ. (21)ಬಿ.ಎನ್.ಎಂ. (22)ಬಿ.ಹೆಚ್.ಎಮ್. (23)ಎಂ.ಡಿ.ಎಸ್. (24)ಎಂ.ಎಸ್.ಡಬ್ಲ್ಯೂ (25) ಎಲ್.ಎಲ್.ಎಂ. (26)ಎಂ.ಎಫ್.ಎ. (27) ಎಂ.ಎಸ್‍ಸಿ. ಬಯೋ ಟೆಕ್ನಾಲಜಿ ಮತ್ತು (28) ಎಂ.ಎಸ್‍ಸಿ. ಎಜಿ
6. ಮರುಪಾವತಿ: ಕೋರ್ಸ್ ಪೂರ್ಣಗೊಂಡ 4 ತಿಂಗಳ ನಂತರ 3 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡುವುದು.
7. ಆಭ್ಯರ್ಥಿಗಳ ಆಯ್ಕೆ: ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಇತರೆ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್‍ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದು.

No comments:

jila panchayat taluka panchayat chunav ane

'ಚುನಾವಣೆ ವಿಚಾರ ನ್ಯಾಯಾಲಯಗಳ ಮುಂದಿರುವುದರಿಂದ ಅಲ್ಲಿಯೇ ಇತ್ಯರ್ಥವಾಗಬೇಕು. ಚುನಾವಣೆ ನಡೆಸಲು ನಾವಂತೂ ತಯಾರಾಗಿದ್ದೇವೆ' ಎಂದು ಸಿಎಂ ಸಿದ್ದರಾಮ...