Followers

Monday, July 22, 2019

">
ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-283-0-03 (2019-20ನೇ ಸಾಲಿನ ಆಯವ್ಯಯ ರೂ.15000.00 ಲಕ್ಷಗಳು)
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.

ಅರ್ಹತೆಗಳು:
1.ಅ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
ಇ) ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ - ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
2.ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ
ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ
ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
3.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು
ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ
ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.
4.ವಿದ್ಯಾರ್ಥಿಗಳು
(i)ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ,
(ii)ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು
(iii)ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
5.ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ (ಔಟಿಟiಟಿe) ಮೂಲಕ ಅರ್ಜಿ ಸಲ್ಲಿಸಬೇಕು.
6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ
ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
(i) ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ
(ii) ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
ಆ) ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಟ 5 ಕಿ.ಮೀ. ದೂರದವರಾಗಿರಬೇಕು.
ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ,
ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ಇ) ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ ಅಂಕಗಳನ್ನು
ಪಡೆದು ಉತ್ತೀರ್ಣರಾಗಿರಬೇಕು.
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-140%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಅಂತಹವರು, ವೈದ್ಯಕೀಯ
ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು.)
7. ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ,
ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಎಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)
ಆ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ,
ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ / ಅನುತ್ತೀರ್ಣರಾದವರು ಅಂಗೀಕೃತ
ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು
ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
8. ಪ್ರತಿ ಮಾಹೆ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು.
ಅನುದಾನ ಹಂಚಿಕೆ ವಿಧಾನ:
(ಅ) ಆಯಾ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವ ಅನುದಾನವನ್ನು ಪ್ರವರ್ಗವಾರು ಈ ಕೆಳಗಿನ ಮೀಸಲಾತಿಯಂತೆ ಮರು ಹಂಚಿಕೆ ಮಾಡಲಾಗುವುದು.
ಪ್ರವರ್ಗವಾರು ಹಂಚಿಕೆ ಮಾಡಬೇಕಾಗಿರುವ ಮೊತ್ತದ ಶೇಕಡಾವಾರು
1ಪ್ರವರ್ಗ - 115%
2ಪ್ರವರ್ಗ – 2ಎ53%
3ಪ್ರವರ್ಗ - 3ಎ14%
4ಪ್ರವರ್ಗ - 3ಬಿ18%
ಒಟ್ಟು100%
(ಆ) ಆರ್ಥಿಕ ವರ್ಷಕ್ಕೆ ಲಭ್ಯವಾಗುವ ಅನುದಾನದ ಮಿತಿಗೆ ಒಳಪಟ್ಟು, ಅರ್ಹತೆ ಮತ್ತು ಆದಾಯಕ್ಕೆ (Merit cum Means)
ಅನುಗುಣವಾಗಿ ಮಂಜೂರು ಮಾಡಬೇಕು.
ಮಂಜೂರಾತಿ ವಿಧಾನ:
1.ಆನ್‍ಲೈನ್ ಮೂಲಕ ಇ-ಪಾಸ್ ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಹಿಂದಿನ ತರಗತಿಯ ಅಂಕಪಟ್ಟಿಯ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಫಿಯನ್ನು ಸಂಬಂಧಪಟ್ಟ
ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ
ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಯ ಹಾಜರಾತಿ ಪ್ರತಿ ಮಾಹೆ ಕನಿಷ್ಟ ಶೇ.75 ರಷ್ಟು ಇರುವುದನ್ನು ಕಾಲೇಜು ಪ್ರಾಂಶುಪಾಲರಿಂದ
ಪಡೆದು, ಆನ್‍ಲೈನ್‍ನಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅಪ್‍ಲೋಡ್ ಮಾಡುವುದು.
7.ಆಯಾ ವರ್ಷದ ಆಯವ್ಯಯಕ್ಕನುಗುಣವಾಗಿ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾಸಿರಿ
ಊಟ ಮತ್ತು ವಸತಿ ಸೌಲಭ್ಯವನ್ನು ಮಂಜೂರು ಮಾಡುವುದು.
8.ಮಂಜೂರಾದ ಮೊತ್ತವನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು.

No comments: