ಮಹಿಳಾ ಸಮೃದ್ಧಿ ಯೋಜನೆ
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಮಹಿಳೆಯರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳಿಗೆ, ಅಂದರೆ ಅಗರಬತ್ತಿ ತಯಾರಿಕೆಗೆ, ರೆಡಿಮೇಡ್ ಗಾರ್ಮೆಂಟ್ಸ್, ಡೈರಿ, ವ್ಯಾಪಾರ ಇತ್ಯಾದಿ ಎಲ್ಲಾ ವ್ಯಾಪಾರ ಚಟುವಟಿಕೆಗಳಿಗೆ ಸಾಲ ಮಂಜೂರು ಮಾಡಲಾಗುವುದು. ಪ್ರತಿ ಫಲಾನುಭವಿಗೆ ಗರಿಷ್ಠ ರೂ.50,000/-ಗಳಂತೆ ಒಂದು ಸ್ವ ಸಹಾಯ ಗುಂಪಿಗೆ ಗರಿಷ್ಠ ರೂ.3.50 ಲಕ್ಷ ಗಳವರೆಗೆ ಶೇ.4ರ ಬಡ್ಡಿ ದರದಲ್ಲಿ ಆರ್ಥಿಕ ನೆರವು ಒದಗಿಸುವುದು. ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿದ್ದು, ಅವರ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯಲ್ಲಿರಬೇಕು.
No comments:
Post a Comment