ಕರ್ನಾಟಕದಲ್ಲಿರುವ ವಸತಿ ರಹಿತರಿಗಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ ವಿವಿಧ ಯೋಜನೆಗಳು: ಅರ್ಜಿ ಸಲ್ಲಿಸೋದು ಹೇಗೆ?
ಪ್ರತಿಯೊಬ್ಬರಿಗೂ ಸ್ವಂತ ಸೂರು ಇರಬೇಕೆಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ಅಡಿಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆ ಇಲ್ಲದ ಅರ್ಹರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರ ಅನುದಾನವನ್ನು ನೀಡುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಮಂದಿ ಬಡವರಿ ಈ ಯೋಜನೆಗಳು ಅನುಕೂಲವಾಗಿದ್ದು, ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ, ಡಾ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ದೇವರಾಜ್ ಅರಸು ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ(ಬಸವ ವಸತಿ ಯೋಜನೆ), ದೇವರಾಜ್ ಅರಸು ವಸತಿ ಯೋಜನೆ ಹಾಗೂ ಡಾ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ ಹೀಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪ್ರತಿಯೊಬ್ಬರಿಗೂ ವಸತಿ ಕಲ್ಪಿಸುವ ಹಲವು ಯೋಜನೆಗಳು ಚಾಲ್ತಿಯಲ್ಲಿವೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವೆಂದರೆ ಗ್ರಾಮೀಣ ಭಾಗದ ಕುಟುಂಬಗಳಿಗೆ ಅವರ ಕನಸಿನ ಮನೆ ಕಟ್ಟಿಸಿಕೊಡುವುದಾಗಿದೆ. ಅಷ್ಟೇ ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಮನೆಯ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪಾಳುಬಿದ್ದ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಮೂಲಭೂತ ಸೌಕರ್ಯವೂ ಈ ಯೋಜನೆಯಲ್ಲಿ ಸೇರಿವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿ ವರ್ಷದ ಬಜೆಟ್ ಗಳಲ್ಲಿ ವಸತಿ ಯೋಜನೆಗಳಿಗಾಗಿಯೇ ಇಂತಿಷ್ಟು ಹಣವನ್ನು ಮೀಸಲಿಡುತ್ತವೆ. ಆಯಾ ವರ್ಷಗಳಲ್ಲಿ ಬಡವರಿಗೆ ಮನೆಗಳನ್ನು ಕಟ್ಟಿಕೊಡುವ ಅಥವಾ ಆರ್ಥಿಕ ನೆರವಿನ ಮೂಲಕ ಬಡವರ ಸ್ವಂತ ಮನೆಯ ಕನಸನ್ನು ನನಸು ಮಾಡುತ್ತಿವೆ.
ವಸತಿ ರಹಿತರು ಮನೆಗಾಗಿ ಅರ್ಜಿ ಸಲ್ಲಿಸುವುದು ಹೇಗೆ?
ರಾಜೀವ್ ಗಾಂಧಿ ವಸತಿ ಯೋಜನೆ
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ-ಆರ್ ಜಿಆರ್ ಎಚ್ ಸಿಎಲ್ ಯಲ್ಲಿ ವಸತಿ ರಹಿತರು ಮನೆಗಾಗಿ ಅರ್ಜಿ ಸಲ್ಲಿಸಬಹುದು.
ಮೊದಲು ಆರ್ ಜಿಆರ್ ಎಚ್ ಸಿಎಲ್ ವೆಬ್ ಸೈಟ್ ಗೆ ಭೇಟಿ ನೀಡಿ
ನೋಂದಣಿ ಅಥವಾ ಆನ್ ಲೈನ್ ಅಪ್ಲಿಕೇಷನ್ ಮೇಲೆ ಕ್ಲಿಕ್ ಮಾಡಿ
ಹೆಸರು, ಲಿಂಗ, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ ಸೇರಿದಂತೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ
ವಿಳಾಸ, ವಾರ್ಷಿಕ ಆದಾಯ ಹಾಗೂ ಆಧಾರ್ ಸಂಖ್ಯೆಯನ್ನು ತಪ್ಪಿದೆ ನಮೂದಿಸಬೇಕು
ಇದಾದ ಬಳಿಕ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ
ಸರ್ಕಾರ ವಸತಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)
ಈ ಯೋಜನೆಯ ಅಡಿಯಲ್ಲಿ ಮನೆಯನ್ನು ಪಡೆಯಲು ನಿಮ್ಮ ಪಂಚಾಯಿತಿಗೆ ಭೇಟಿ ನೀಡಿ ಮನೆಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಪಿಎಂಎವೈ ಯೋಜನೆಯ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಆರ್ಥಿಕ ನೆರವು ನೀಡಲಾಗುತ್ತದೆ
ಕರ್ನಾಟಕ ಸರ್ಕಾರವು ಪಿಎಂಎವೈ ಅಡಿಯಲ್ಲಿ ನಿರ್ಮಿಸಲಾಗುವ ಪ್ರತಿ ಮನೆಗೆ 3.5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುತ್ತದೆ
Raghavendra M Y
No comments:
Post a Comment